ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಬಿಡುಗಡೆ. ಇಲ್ಲಿದೆ ನೋಡಿ ಫಸ್ಟ್ ಲಿಸ್ಟ್

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಬಿಡುಗಡೆ. ಇಲ್ಲಿದೆ ನೋಡಿ ಫಸ್ಟ್ ಲಿಸ್ಟ್

ಮೇ 12 ರಂದು ನಡೆಯಲಿರುವ ರಾಜ್ಯದ ವಿಧಾನಸಭಾ ಚುನಾವಣೆ  ಕಾಂಗ್ರೆಸ್ ಹುರಿಯಾಳುಗಳ ಪಟ್ಟಿ  ಅಧಿಕೃತವಾಗಿ ಬಿಡುಗಡೆಯಾಗಿದೆ.  ಬಹಳಷ್ಟು ಸರ್ಕಸ್ ಮಾಡಿ ಕೊನೆಗೂ ಅಳೆದು ತೂಗಿ  ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. , ಒಟ್ಟು 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇಲ್ಲಿದೆ ನೋಡಿ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿರುವ  ಅಭ್ಯರ್ಥಿಗಳ ಪಟ್ಟಿ.

ಅಭ್ಯರ್ಥಿಗಳನ್ನು ಘೋಷಿಸದ 6 ಕ್ಷೇತ್ರಗಳು 
ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು 218 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸಿದ್ದು, ಉಳಿದ 6 ಕ್ಷೇತ್ರಗಳಿಗೆ ಇನ್ನಷ್ಟೇ ಅಭ್ಯರ್ಥಿಗಳ ಆಯ್ಕೆ ನಡೆಯಬೇಕಿದೆ.  ಅಭ್ಯರ್ಥಿಗಳನ್ನು ಘೋಷಿಸದ 6 ಕ್ಷೇತ್ರಗಳಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದಲ್ಲಿ ಈ ಹಿಂದೆ ಮಾತುಕೊಟ್ಟಂತೆ ರೈತ ನಾಯಕ ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರ ರೈತ ಸಂಘವನ್ನು ಕಾಂಗ್ರೆಸ್ ಬೆಂಬಲಿಸಲಿದೆ ಎನ್ನಲಾಗಿದೆ.

ಅಲ್ಲದೇ ಬೆಂಗಳೂರಿನ ಶಾಂತಿನಗರ ಕ್ಷೇತ್ರದಲ್ಲಿ ಟಿಕೆಟ್ ಘೋಷಣೆ ಬಾಕಿಯಿದ್ದು, ನಲಪಾಡ್ ಹಲ್ಲೆ ಪ್ರಕರಣದ ನಂತರ ಹಾಲಿ ಶಾಸಕ ಹಾರಿಸ್ ಗೆ ಟಿಕೆಟ್ ಕೈತಪ್ಪುವ ಸಾಧ್ಯತೆಗಳಿತ್ತು. ಅದರಂತೆ ಶಾಸಕ ಹಾರಿಸ್ ಗೆ ಟಿಕೆಟ್ ಘೋಷಣೆಯಾಗಿಲ್ಲ ಎನ್ನಲಾಗಿದೆ. ಅದರೆ ಶಾಂತಿನಗರ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಘೋಷಣೆಯಾಗಲಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.  ಉಳಿದಂತೆ ಬೆಳಗಾವಿ ಜಿಲ್ಲೆಯ ಕಿತ್ತೂರು, ವಿಜಯಪುರ ಜಿಲ್ಲೆಯ ನಾಗಠಾಣ, ಸಿಂಧಗಿ, ರಾಯಚೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆಯಾಗಿಲ್ಲ

 

Leave a Reply

Your email address will not be published.