ಕುಮಾರಸ್ವಾಮಿಯವರ ಹೇಳಿಕೆಗೆ ತಿರುಗೆಟು ನೀಡಿದ ಸಿಎಂ

ಕುಮಾರಸ್ವಾಮಿಯವರ ಹೇಳಿಕೆಗೆ ತಿರುಗೆಟು ನೀಡಿದ ಸಿಎಂ

ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಮಾಡಿದರೂ ನನ್ನ ಸೋಲಿಸಲಾಗಲ್ಲ ಎನ್ನುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರು ಮಂಡಕಳ್ಳಿ ವಿಮಾನನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಆ ರೀತಿ ಹೇಳಿಕೆ ನೀಡಬಾರದು. ವೋಟ್ ಗಳು ಕುಮಾರಸ್ವಾಮಿಯವರ ಜೆಬ್ ನಲ್ಲಿ ಇಲ್ಲ. ಮೊಯ್ಲಿ ವಿರುದ್ಧ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೋತಾಗ ಎಲ್ಲಿ ಹೋಗಿದ್ದರು. ಪ್ರಜಾಪ್ರಭುತ್ವದಲ್ಲಿ ಯಾರು ಗೆಲ್ಲಬೇಕು ಸೋಲಬೇಕು ಅನ್ನೋದನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು. ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಇಷ್ಟು ಬಾರಿ ಸ್ಪರ್ಧೆ ಮಾಡಿದರೂ, ಯಾವಾಗಲು 2 ಕಡೆ ಸ್ಪರ್ಧೆ ಮಾಡಿಲ್ಲ. ನಾನು ಚಾಮುಂಡೇಶ್ವರಿ ಒಂದರಲ್ಲೇ ಸ್ಪರ್ಧೆ ಮಾಡುವುದು ಎಂದು ಸ್ಪಷ್ಟಪಡಿಸಿದರು. ಚಾಮುಂಡೇಶ್ವರಿಯಲ್ಲೇ ಮೋಕ್ಷ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಈ ರೀತಿ ಹೇಳಿಕೆ ಗಳನ್ನು ನೀಡಬಾರದು ಎಂದು ಕುಮಾರಸ್ವಾಮಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಮಾರಸ್ವಾಮಿ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯಿಸಿ ಉಪ ಚುನಾವಣೆಯಲ್ಲೂ ಕುಮಾರಸ್ವಾಮಿ ಚಾಮುಂಡೇಶ್ವರಿ ಯಲ್ಲಿ ಪ್ರಚಾರ ಮಾಡಿದ್ದರು. ಆದರೆ ಗೆದ್ದಿದ್ದು ಮಾತ್ರ ನಾನೇ, ಏನ್ ಮಾಡಿದರು ಆವಾಗ? ಈವಾಗ್ಲೂ ಆದೇ ರೀತಿಯಾಗುತ್ತೆ ಎಂದರು. ಚಾಮುಂಡೇಶ್ವರಿ ಕ್ಷೇತ್ರ ಹೇಗಿದೆ,ನೀವೇ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು. ನಾನು ಏ.20ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭ ಸಚಿವ ಡಾ.ಹೆಚ್ ಸಿ ಮಹದೇಪ್ಪ , ಕೊಳ್ಳೆಗಾಲದ ಕೈ ಅಭ್ಯರ್ಥಿ ಎ ಆರ್ ಕೃಷ್ಣಮೂರ್ತಿ ಸಾಥ್ ನೀಡಿದರು. ಒಟ್ಟಿನಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ನಿರಂತರವಾಗಿ ನಡೆಯುತ್ತಲೇ ಇದ್ದು, ಮತದಾರ ಮಾತ್ರ ಸೈಲೆಂಟ್ ಆಗಿ ಕುಳಿತು ಎಲ್ಲವನ್ನೂ ವೀಕ್ಷಿಸುತ್ತಲೇ ಇದ್ದಾನೆ.

Leave a Reply

Your email address will not be published.