ಮೈಸೂರು:ಕಥುವಾದಲ್ಲಿ ಆಸಿಫಾ ಎಂಬ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಗಡಿಯಾರ ಗೋಪುರದ ಬಳಿ ಜಮಾಯಿಸಿದ ವಿದ್ಯಾರ್ಥಿಗಳಿಂದು ಮಾತನಾಡಿ ಅತ್ಯಾಚಾರಿ ಆರೋಪಿಗಳನ್ನು ಗಲ್ಲಿಗೇರಿಸಿ, ಅವರಿಗೆ ಕಠಿಣ ಶಿಕ್ಷೆ ನೀಡಿ, ಕಠಿಣ ಶಿಕ್ಷೆ ನೀಡಿದರೆ ಮತ್ತೆ ಅಂಥಹ ಕೃತ್ಯಗಳು ಮರುಕಳಿಸುವುದಿಲ್ಲ ಎಂದು ಒತ್ತಾಯಿಸಿದರು. ದೇಶದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಅಪರಾಧಗಳನ್ನು ನಿಲ್ಲಿಸಿ ಕಠಿಣ ಶಿಕ್ಷೆ ವಿಧಿಸಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.