ಮೈಸೂರು:ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಮೊಳೆಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ತಿಪ್ಪೇಸ್ವಾಮಿ ಆಗಮಿಸಿದ್ದಾರೆ.
ನಿನ್ನೆ ಸಚಿವ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ್ದ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದರು. ಬಿಜೆಪಿ ಶಾಸಕರಾಗಿದ್ದ ತಿಪ್ಪೇಸ್ವಾಮಿಯವರಿಗೆ ಟಿಕೇಟ್ ಲಭಿಸದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು. ಅಲ್ಲಿ ಸಂಸದ ಶ್ರೀರಾಮುಲು ಅವರಿಗೆ ಬಿಜೆಪಿ ಟಿಕೇಟ್ ನೀಡಲಾಗಿದೆ. ಸಂಸದ ಶ್ರೀರಾಮುಲು ಅವರ ವಿರುದ್ಧ ತಿರುಗಿ ಬಿದ್ದಿರುವ ತಿಪ್ಪೇಸ್ವಾಮಿ ಕಮಲಕ್ಕೆ ಕೈ ಕೊಟ್ಟು, ಕೈ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇದೀಗ ಮೊಣಕಾಲ್ಮೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರಾ ಎಂಬ ಪ್ರಶ್ನೆ ಮೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭೇಟಿ ಕುತೂಹಲ ಮೂಡಿಸಿದೆ.