Breaking News

ಐಪಿಎಲ್ ವೇಳಾಪಟ್ಟಿ ಪ್ರಕಟ: 9 ನಗರಕ್ಕೆ ಆತಿಥ್ಯ

ಐಪಿಎಲ್ ವೇಳಾಪಟ್ಟಿ ಪ್ರಕಟ: 9 ನಗರಕ್ಕೆ ಆತಿಥ್ಯ

ಮುಂಬೈ: ಮುಂಬರುವ 11ನೇ ಆವೃತ್ತಿಯ ಐಪಿಎಲ್ ವೇಳಾಪಟ್ಟಿ ಪ್ರಕಟ ಗೊಂಡಿದ್ದು, 51 ದಿನಗಳ ಕಾಲ ನಡೆಯಲಿರುವ ಟೂರ್ನಿಗೆ ಬೆಂಗಳೂರು ಸೇರಿ ದಂತೆ 9 ನಗರಗಳು ಆತಿಥ್ಯ ವಹಿಸಲಿವೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್’ಕಿಂಗ್ಸ್ ತಂಡಗಳು ಏ.7ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಮುಖಾ ಮುಖಿಯಾಗಲಿವೆ. ಉದ್ಘಾಟನೆ ಹಾಗೂ ಫೈನಲ್ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿ ಯಾಗಲಿದೆ.

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯವನ್ನು ಏ.8 ರಂದು ಆಡಲಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ 2 ಬಾರಿ ಚಾಂಪಿಯನ್ ಕೋಲ್ಕತಾ ನೈಟ್’ ರೈಡರ್ಸ್ ತಂಡವನ್ನು ಆರ್.ಸಿ.ಬಿ ಎದುರಿಸಲಿದೆ. ಬೆಂಗಳೂರು ತಂಡ ತವರಿನಲ್ಲಿ ಏ.13ರಂದು ಆಡಲಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ತವರಿನಲ್ಲಿ ಒಟ್ಟು 7 ಪಂದ್ಯಗಳನ್ನು ಆಡಲಿದೆ.

Leave a Reply

Your email address will not be published.