Breaking News
ಸಿ.ಎಂ ಸಿದ್ದುಗೆ ಬಿಗ್ ಶಾಕ್ : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ನ ಹಲವು ಮಂದಿ ಜೆಡಿಎಸ್ ಗೆ

ಸಿ.ಎಂ ಸಿದ್ದುಗೆ ಬಿಗ್ ಶಾಕ್ : ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ನ ಹಲವು ಮಂದಿ ಜೆಡಿಎಸ್ ಗೆ

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಕ್ಷೇತ್ರದಿಂದ ಸಿ.ಎಂ ಸಿದ್ದರಾಮಯ್ಯ ಈ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಸಿ.ಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಆದರೆ ಈ ನಡುವೆ ಚಾಮುಂಡೇಶ್ವರಿ ವಿಧಾಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ ಪಡೆದು ಗೆದ್ದು ಗ್ರಾಮಪಂಚಾಯತಿ ಸದ್ಯಸರಾಗಿದ್ದವರು ಚಾಮುಂಡೇಶ್ವರಿ ಕ್ಷೇತ್ರ ಪ್ರತಿನಿಧಿಸುತ್ತಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರ ಜೊತೆ ಅಧಿಕೃತವಾಗಿ ಇಂದು ಜೆಡಿಎಸ್ ಗೆ ಸೇರ್ಪಡೆಯಾದರು. ಇನ್ನು ಇದೇ ವೇಳೆ ಈ ಬಾರಿ ವರುಣಾದಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಸಿ.ಎಂ ಸಿದ್ದರಾಮಯ್ಯವರಿಗೆ ಇದೊಂದು ದೊಡ್ಡಪ್ರಮಾಣದಲ್ಲಿ ಆಘಾತವಾಗಿದೆ ಅಂತ ರಾಜಕೀಯ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಸದ್ಯ ಚಾಮುಂಡೇಶ್ವರಿ ಕ್ಷೇತ್ರ ಪ್ರತಿನಿಧಿಸುತ್ತಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಸೋಲಿಸುವುದಕ್ಕೆ ಜಾತಿ ಆಧಾರಿತವಾಗಿ ಕೂಡ ಸಿ.ಎಂ ಮುಂದಾಗಿದ್ದು ಈ ನಿಟ್ಟಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಹುಸಂಖ್ಯಾತ ಪ್ರಮಾಣದಲ್ಲಿರುವ ಒಕ್ಕಲಿಗ ಸಮುದಾಯದ ಮುಖಂಡರನ್ನು ಕೂಡ ಸಿ.ಎಂ ಭೇಟಿ ಮಾಡಿ ನನಗೆ ಬೆಂಬಲ ನೀಡುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published.