Breaking News

ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಮಧು ಬಂಗಾರಪ್ಪ!

ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಮಧು ಬಂಗಾರಪ್ಪ!

ಮೈಸೂರು : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಶ್ರೀನಿವಾಸ್ ಪ್ರಸಾದ್ ಮನೆಗೆ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ದಿಢೀರ್ ಬೇಟಿ ನೀಡಿದ್ದಾರೆ. ಮೈಸೂರಿನಲ್ಲಿ ಪ್ರಚಾರ ನಡೆಸಿದ ಮಧು ಬಂಗಾರಪ್ಪ, ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್ ಮನೆಗೆ ಭೇಟಿ ನೀಡಿ, ಕೆಲ ಕಾಲ ಮಾತುಕತೆ ನಡೆಸಿದರು. ಇನ್ನು ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಮಾತನಾಡಿದ ಮಧು ಬಂಗಾರಪ್ಪ ಕೇವಲ ಔಪಚಾರಿಕ ಭೇಟಿ ಅಷ್ಟೇ. ಅವರು ಹಿರಿಯರಿದ್ದಾರೆ ಚುನಾವಣೆಯಲ್ಲಿ ಅವರ ಆರ್ಶಿವಾರ್ದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಮಧು ಬಂಗಾರಪ್ಪ ಭೇಟಿ ಕೇವಲ ಔಪಚಾರಿಕ ಭೇಟಿಯಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಕೂಡ ಸ್ಪಷ್ಟಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ಬಿಜೆಪಿ ತೊರೆಯುವುದಿಲ್ಲ. ಅವರ ಜೊತೆ ಮಾತನಾಡಲಾಗಿದೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

Leave a Reply

Your email address will not be published.