Breaking News

ನಲಪಾಡ್’ಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

ನಲಪಾಡ್’ಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

ವಿದ್ವತ್ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ನಲಪಾಡ್ ಮತ್ತು ಸಹಚರರ ನ್ಯಾಯಾಂಗ ಬಂಧನದ ಅವಧಿ 14 ದಿನಗಳ ಕಾಲ ವಿಸ್ತರಣೆಗೊಂಡಿದೆ. ಮಹಮ್ಮದ್ ನಲಪಾಡ್ ಮತ್ತು ಆತನ ಸಹಚರರ ನ್ಯಾಯಾಂಗ ಬಂಧನದ ಅವಧಿಯನ್ನು ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಎ.28ರವರೆಗೆ ವಿಸ್ತರಿಸಿದ್ದಾರೆ.  ಪರಪ್ಪನ ಅಗ್ರಹಾರದಲ್ಲಿದ್ದ ನಲಪಾಡ್ ಮತ್ತು ಏಳು ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.  ವಾದ, ವಿವಾದ ಆಲಿಸಿದ ನ್ಯಾಯಮೂರ್ತಿಗಳು ನ್ಯಾಯಾಂಗ ಬಂಧನದ ಅವಧಿಯನ್ನು 28ರವರೆಗೆ ವಿಸ್ತರಿಸಿದ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲೇ ಇರಬೇಕಾದುದು ಅನಿವಾರ್ಯವಾಗಿದೆ.

Leave a Reply

Your email address will not be published.