Breaking News
ರಾಜಕೀಯ ‘ರಣರಂಗ’ದಲ್ಲಿ ಕಾದಾಡಲಿರುವ ಸಿನಿಮಾ ಮಂದಿ ಇವರೇ

ರಾಜಕೀಯ ‘ರಣರಂಗ’ದಲ್ಲಿ ಕಾದಾಡಲಿರುವ ಸಿನಿಮಾ ಮಂದಿ ಇವರೇ

ಸಿನಿಮಾ ಕಲಾವಿದರು ರಾಜಕೀಯ ಪಕ್ಷ ಸೇರೋದು ಹಾಗೂ ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರ ಮಾಡೋದು ಸಾಮಾನ್ಯ. ಇನ್ನು ಈ ಬಾರಿಯ ಚುನಾವಣೆಯಲ್ಲಿ ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್, ಮಾಲಾಶ್ರೀ, ಸಾಧುಕೋಕಿಲಾ, ರಚಿತಾ ರಾಮ್, ಅಮೂಲ್ಯ ಹೀಗೆ,,,,,ಹಲವು ನಟ-ನಟಿಯರು ತಮ್ಮ ಆತ್ಮೀಯ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಪರವಾಗಿ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇದು ಒಂದು ಕಡೆಯಾದರೇ, ಮತ್ತೊಂದೆಡೆ ಸಿನಿಮಾ ರಂಗದಲ್ಲೇ ಗುರುತಿಸಿಕೊಂಡು ಕೋಟ್ಯಾಂತರ ಅಭಿಮಾನಿಗಳ ಅಭಿಮಾನ ಪಡೆದುಕೊಂಡಿದ್ದ ಕಲಾವಿದರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಷ್ ಈ ಬಾರಿಯ ಚುನಾವಣೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಅಂಬರೀಷ್, ಕೊನೆಗೂ ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹಾಲಿ ಶಾಸಕರಾಗಿರುವ ಅಂಬಿ ಈಗಲೂ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ, ‘ಅಂಬಿ ನಿಂಗೆ ವಯಸಾಯ್ತೋ’ ಚಿತ್ರದಲ್ಲಿ ನಟಿಸುತ್ತಿದ್ದಾರೆ
ಡೈಲಾಗ್ ಕಿಂಗ್ ಸಾಯಿ ಕುಮಾರ್ ಬಹುಭಾಷಾ ನಟ, ಡೈಲಾಗ್ ಕಿಂಗ್ ಸಾಯಿ ಕುಮಾರ್ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಾಯಿ ಕುಮಾರ್ ಚುನಾವಣ ಅಖಾಡಕ್ಕೆ ಧುಮುಕಿದ್ದಾರೆ.

ನಟಿ ಉಮಾಶ್ರೀ ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟಿ ಉಮಾಶ್ರೀ ಸ್ಪರ್ಧೆ ಮಾಡುತ್ತಿದ್ದಾರೆ. ಕಳೆದ ಬಾರಿ ಗೆದ್ದು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಚಿವೆಯಾಗಿರುವ ಉಮಾಶ್ರೀ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧೆಗೆ ನಿಂತಿದ್ದಾರೆ.
ಸಿಪಿ ಯೋಗೇಶ್ವರ್ ಸಕ್ರೀಯ ರಾಜಕಾರಣದಲ್ಲಿ ತೊಡಗಕೊಂಡಿರುವ ನಟ-ರಾಜಕಾರಣಿ ಸಿ.ಪಿ ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಹಾಲಿ ಶಾಸಕರಾಗಿರುವ ಯೋಗೇಶ್ವರ್ ವಿರುದ್ಧ ಈ ಬಾರಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಖಾಡಕ್ಕೆ ಇಳಿದಿದ್ದಾರೆ.

ಕುಮಾರ್ ಬಂಗಾರಪ್ಪ ಸೊರಬ ಕ್ಷೇತ್ರದಲ್ಲಿ ಸಹೋದರರ ಮಧ್ಯೆ ಸೆಣಸಾಟ ನಡೆಯಲಿದೆ. ನಟ, ರಾಜಕಾರಣಿ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕುಮಾರ್ ಬಂಗಾರಪ್ಪ ಅವರಿಗೆ ಜೆ.ಡಿ.ಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಎದುರಾಳಿ ಆಗಿದ್ದಾರೆ.

ನಿರ್ಮಾಪಕ ಸಿ.ಆರ್ ಮನೋಹರ್ ಕನ್ನಡದ ದೊಡ್ಡ ನಿರ್ಮಾಪಕ ಎನಿಸಿಕೊಂಡಿರುವ ಸಿ.ಆರ್ ಮನೋಹರ್ ಬಾಗೇಪಲ್ಲಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ಮನೋಹರ್ ಚುನಾವಣೆ ಕಣದಲ್ಲಿದ್ದಾರೆ. ಇವರಿಗೆ ಬಿಜೆಪಿ ಅಭ್ಯರ್ಥಿ ಸಾಯಿಕುಮಾರ್ ಎದುರಾಳಿ.

ನಿರ್ಮಾಪಕ ಮುನಿರತ್ನ ಕನ್ನಡ ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ಮುನಿರತ್ನ ಅವರು ರಾಜರಾಜೇಶ್ವರಿ ನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹಾಲಿ ಶಾಸಕರಾಗಿರುವ ಮುನಿರತ್ನ ಸದ್ಯ ಕುರುಕ್ಷೇತ್ರ’ ಎಂಬ ಪೌರಾಣಿಕ ಸಿನಿಮಾವನ್ನ ಬಹುಕೋಟಿ ವೆಚ್ಚದಲ್ಲಿ ತಯಾರು ಮಾಡುತ್ತಿದ್ದಾರೆ.

ನಿರ್ಮಾಪಕ ಕುಮಾರಸ್ವಾಮಿ ಜೆ.ಡಿ.ಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಈ ಸಲ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕಡೆಯೂ ಸ್ಪರ್ಧೆ ಮಾಡುತ್ತಿದ್ದಾರೆ. ಸಕ್ರೀಯ ರಾಜಕಾರಣದಲ್ಲಿರುವ ಕುಮಾರಸ್ವಾಮಿ ನಿರ್ಮಾಪಕರು ಕೂಡ ಆಗಿದ್ದು, ಸದ್ಯ, ನಿಖಿಲ್ ಕುಮಾರ್ ಅಭಿನಸಯಿಸುತ್ತಿರುವ ‘ಶ್ರೀನಿವಾಸ ಕಲ್ಯಾಣ’ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

 ಶಶಿಕುಮಾರ್  ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಶಶಿಕುಮಾರ್ ಇನ್ನು ಬಿಜೆಪಿ ತೊರೆದು ಜೆ.ಡಿ.ಎಸ್ ಪಕ್ಷ ಸೇರ್ಪಡೆಗೊಂಡಿರುವ ನಟ ಶಶಿಕುಮಾರ್ ಹೊಸದುರ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಸದ್ಯ, ಶಶಿಕುಮಾರ್ ಅವರು ಮುನಿರತ್ನ ನಿರ್ಮಾಣದ ‘ಕುರುಕ್ಷೇತ್ರ’ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Leave a Reply

Your email address will not be published.