Breaking News
ಮೈಸೂರು ಅರಮನೆ ಕಟ್ಟಿದು ಯಾವಾಗ ಗೊತ್ತಾ ?

ಮೈಸೂರು ಅರಮನೆ ಕಟ್ಟಿದು ಯಾವಾಗ ಗೊತ್ತಾ ?

18ನೆಯ ಶತಮಾನದ ಕೊನೆಯ ಹೊತ್ತಿಗೆ ಅರಮನೆ ಮತ್ತಷ್ಟು ಹಾಳಾಗಿ 1793 ರಲ್ಲಿ ಟಿಪ್ಪು ಸುಲ್ತಾನ್ ಕಾಲದಲ್ಲಿ ಅದನ್ನು ಬೀಳಿಸಲಾಯಿತು. 1803ರಲ್ಲಿ ಇನ್ನೊಂದು ಅರಮನೆಯನ್ನು ಅದರ ಸ್ಥಳದಲ್ಲಿ ಕಟ್ಟಿಸಲಾಯಿತು. ಈ ಅರಮನೆ ಸಹ 1897 ರಲ್ಲಿ ರಾಜಕುಮಾರಿ ಜಯಲಕ್ಷಮ್ಮಣ್ಣಿ ಅವರ ಮದುವೆಯ ಸಂದರ್ಭದಲ್ಲಿ ಬೆಂಕಿ ಬಿದ್ದು ನಾಶವಾಯಿತು. ಇನ್ನು ಇದೇ ವರುಷದಲ್ಲಿ ಈಗ ಇರುವ ಅಂಬಾವಿಲಾಸ ಅರಮನೆ ಕಟ್ಟಲು ಆರಂಭಿಸಿ 1912 ರಲ್ಲಿ ಅರಮನೆ ನಿರ್ಮಾಣ ಕಾರ್ಯ ಸಂಪೂರ್ಣವಾಯಿತು.

ತಜ್ಞರಿಂದ ನೀಲನಕ್ಷೆ

2 ಎಕರೆ ಪ್ರದೇಶದಲ್ಲಿ ಹಿಂದೂ, ಇಸ್ಲಾಮಿಕ್ ಹಾಗೂ ಪಾಶ್ಚಿಮಾತ್ಯ ವಾಸ್ತುಶೈಲಿಯ ಸಮ್ಮಿಲನದಿಂದ ವೇಸರ (ಇಂಡೋ ಸಾರ್‌ಸಾನಿಕ್) ಶೈಲಿಯಲ್ಲಿ ಮೈಸೂರು ಅರಮನೆ ಸುಂದರವಾಗಿ ಮೈದಳೆಯಿತು. ಮೈಸೂರು ಸಂಸ್ಥಾನದ ಆಳ್ವಿಕೆಯ ಹೊಣೆಯನ್ನು ಹೊತ್ತಿದ್ದ ವಾಣಿವಿಲಾಸ ಸನ್ನಿಧಾನ ಬಿರುದಾಂಕಿತರಾದ ಕೆಂಪನಂಜಮ್ಮಣ್ಣಿಯವರು ಅರಮನೆ ನಿರ್ಮಾಣದ ದಿಟ್ಟ ನಿರ್ಧಾರ ತಳೆದರೆಂಬುದು ವಿಶೇಷ ಅಂಶ. ಈ ಅರಮನೆಗೆ ಬ್ರಿಟಿಷ್ ವಾಸ್ತುಶಿಲ್ಪಿ ಹೆನ್ರಿ ಇರ್ವಿನ್ ನಕಾಶೆ ತಯಾರಿಸಿದರೆಂದು ಇತಿಹಾಸ ಹೇಳುತ್ತದೆ. ಈ ವಾಸ್ತು ವಿನ್ಯಾಸಕ್ಕಾಗಿ ಆತ ಆಗಿನ ಕಾಲದಲ್ಲೇ 12 ಸಾವಿರ ರೂ.ಗಳನ್ನು ವಾಸ್ತುಶುಲ್ಕವಾಗಿ ಪಡೆದಿದ್ದನಂತೆ. ಅರಮನೆ ನಿರ್ಮಾಣಕ್ಕೆ ಮುನ್ನ ಚಿತ್ರಕಲಾವಿದರನ್ನು ಅಧ್ಯಯನಾರ್ಥ ಯುರೋಪ್ ರಾಷ್ಟ್ರಕ್ಕೆ ಹಾಗೂ ಭಾರತದ ಹೆಸರಾಂತ ಹಳೆಬೀಡು, ಬೇಲೂರು, ತಂಜಾವೂರು, ಮಧ್ಯಪ್ರದೇಶ, ಜಯಪುರ ಸೇರಿದಂತೆ ವಿವಿಧೆಡೆಗೆ ಕಳುಹಿಸಲಾಗಿತ್ತು.

ಅರಮನೆ ನಗರಿ ಎಂಬ ಹೆಸರು ಬಂದಿದ್ದೇ ಇದದರಿಂದ!

ಅರಮನೆಯ ಮುಂಭಾಗದಲ್ಲಿ ಏಳು ವಿಶಾಲವಾದ ಮತ್ತು ಎರಡು ಚಿಕ್ಕ ಕಮಾನುಗಳಿವೆ. ಮಧ್ಯದ ಕಮಾನಿನ ಮೇಲಿರುವ ಗಜಲಕ್ಷ್ಮಿಯ ಶಿಲ್ಪ ಹೃದಯಂಗಮವಾಗಿದೆ. ಮೈಸೂರಿಗೆ ಅರಮನೆಗಳ ನಗರಿ ಎಂದು ಹೆಸರು ಬರಲು ಮೂರು ಅಂತಸ್ತಿನ ಈ ಭವ್ಯ ಸೌಧದ ಕೊಡುಗೆ ಅಪಾರ. ಚಚ್ಚೌಕದ ಕಂಬಗಳು, ಮೇಲೆ ಸುಂದರ ವಿನ್ಯಾಸದ ಗೋಪುರ, ವಿಶಾಲವಾದ ಮೈದಾನ, ಸುಂದರ ಹಾಗೂ ಮನಮೋಹಕ ಶಿಲ್ಪಗಳಿಂದ, ನುಣುಪಾದ ನೆಲಹಾಸು, ಗಾಜಿನ ಅಲಂಕಾರಿಕ ವಿನ್ಯಾಸದಿಂದ ಕೂಡಿದ ದರ್ಬಾರ್ ಹಾಲ್, ಅರಮನೆಯ ಸುತ್ತ ಇರುವ ಸಿಂಹ ಲಾಂಛನಗಳು, ಸುಂದರ ಶಿಲ್ಪದ ಪ್ರವೇಶದ್ವಾರದ ನೋಟವೇ ಒಂದು ಸೊಬಗು

Leave a Reply

Your email address will not be published.