Breaking News

ಮೈಸೂರು ರಾಜರ ಬಗ್ಗೆ ನಿಮಗೆ ಎಷ್ಟು ಗೊತ್ತು?

ಮೈಸೂರು ರಾಜರ ಬಗ್ಗೆ ನಿಮಗೆ ಎಷ್ಟು ಗೊತ್ತು?

ಕಂಠೀರವ ಮಹಾರಾಜ ಒಡೆಯರ್

ಚಿಕ್ಕದೇವರಾಜ ಒಡೆಯರ್ ಪುತ್ರರಾದ ಕಂಠೀರವ ಮಹಾರಾಜ ಒಡೆಯರ್ 1704ರಿಂದ 1713ರವರೆಗೆ ಆಡಳಿತ ನಡೆಸಿದರು. ಇವರ ಕಾಲದಲ್ಲಿ ಔರಂಗಜೇಬನ ಆಡಳಿತದಲ್ಲಿ ದಕ್ಷಿಣ ಭಾರತದ ಗೌರ್ನರ್ ಶ್ರೀರಂಗಪಟ್ಟಣದ ಮೇಲೆ ದಂಡೆತ್ತಿ ಬಂದಿದ್ದರು. ಈ ಸಂದರ್ಭ ಕಂಠೀರವ ಮಹಾರಾಜ ಒಡೆಯರ್ ಒಂದೂವರೆ ಕೋಟಿ ರೂ.ಗಳ ಕಪ್ಪಕಾಣಿಕೆ ಸಲ್ಲಿಸಿ ಸಂಧಾನ ಮಾಡಿಕೊಂಡರು.

 ದೊಡ್ಡ ಕೃಷ್ಣರಾಜ ಒಡೆಯರ್ 

 ದೊಡ್ಡ ಕೃಷ್ಣರಾಜ ಒಡೆಯರ್ ಕೇವಲ ಹನ್ನೆರಡು ವರ್ಷಕ್ಕೆ ಪಟ್ಟಕ್ಕೇರಿದರು. 1714ರಿಂದ 1732ರವರೆಗೆ ಆಡಳಿತ ನಡೆಸಿದರು. ಇವರ ಕಾಲದಲ್ಲಿ ನಿಜಾಂ, ಆರ್ಕಾಟ್ ನವಾಬ್, ಸಿರಾ ಕಡಪ, ಕರ್ನೂಲ್, ಸವಾನೂರ್ ಮತ್ತು ಇಕ್ಕೇರಿ ರಾಜರು ಒಟ್ಟಾಗಿ ಯುದ್ಧಕ್ಕೆ ಬಂದಿದ್ದರಿಂದ ಒಂದುಕೋಟಿ ಕಾಣಿಕೆ ನೀಡಿ ಸಂಧಾನ ಮಾಡಿಕೊಳ್ಳಲಾಯಿತು.

Leave a Reply

Your email address will not be published.