Breaking News

ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ಮೈಸೂರು ರಾಜರದು -ಯಾರು ಗೊತ್ತಾ?

ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ಮೈಸೂರು ರಾಜರದು -ಯಾರು ಗೊತ್ತಾ?

೧೯೧೧ ರಲ್ಲಿ ಆರಂಭವಾದ ‘ಕೃಷ್ಣರಾಜ ಸಾಗರ’ ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. ೧೯೦೦ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿ ಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು.
ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ ೧೯೦೫ ಆಗಸ್ಟ್ ೩ ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು.
ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು .ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದುದು. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ೨೭೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.
ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ೧೯೦೬ ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.
ಬುಡಕಟ್ಟು, ಗಿರಿಜನ, ಅರಣ್ಯವಾಸಿಗಳಿಗೆ ಮೊಟ್ಟ ಮೊದಲು ಶಾಲೆಗಳನ್ನು ತೆರೆಯಲಾಯಿತು. ಅಸ್ಪೃಶ್ಯರಿಗಾಗಿಯೇ ಹುಸ್ಕೂರು ಹಾಗೂ ಟಿ.ನರಸೀಪುರದಲ್ಲಿ ಶಾಲೆಗಳನ್ನು ಪ್ರಾರಂಭಿಸಲಾಯಿತು. ತಂತರ ಇವರ ಆಡಳಿತಾವಧಿಯಲ್ಲಿ ಸುಮಾರು ೮೦೦ ಶಾಲೆಗಳನ್ನು ತೆರೆಯಲಾಯಿತು.
ಮೊಟ್ಟ ಮೊದಲ ಬಾರಿಗೆ ಸ್ರೀ ಶಿಕ್ಷಣವನ್ನು ಕಡ್ಡಾಯ ಮಾಡಲಾಯಿತು.
೧೯೦೨ – ಬೆಂಗಳೂರಿನ ಪ್ರಥಮ ವಾಣಿಜ್ಯಶಾಲೆ ಪ್ರಾರಂಭಿಸಲಾಯಿತು.
೧೯೦೩ – ಮೈಸೂರಿನಲ್ಲಿ ತಾಂತ್ರಿಕ ಶಾಲಾ ಸ್ಥಾಪನೆ.
೧೯೦೬ – ಕುರುಡ ಹಾಗೂ ಮೂಕ ಮಕ್ಕಳಿಗೆ ಶಾಲೆಗಳನ್ನು ಪ್ರಾರಂಭಿಸಿದರು.
೧೯೧೧ – ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಆರಂಭಿಸಲಾಯಿತು.
೧೯೧೨ – ಮೊದಲ ಬಾರಿಗೆ ವಯಸ್ಕರ ಶಿಕ್ಷಣ ಆಂದೋಲನ ಪ್ರಾರಂಭಿಸಿ, ೭೦೦೦ ಸಾಕ್ಷರತಾ ಕೇಂದ್ರಗಳನ್ನು ತೆರೆದಿದ್ದರು.
೧೯೧೬ – ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆ. ಉರ್ದು ಶಾಲೆಗಳ ಸ್ಥಾಪನೆ.
೧೯೧೮ – ಶಾಲಾ ಪ್ರವೇಶಕ್ಕೆ ಜಾತಿ ಪದ್ದತಿಯನ್ನು ನಿರ್ಮೂಲನೆ ಮಾಡಲಾಯಿತು.
೧೯೧೯ – ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕವನ್ನು ರದ್ದು ಮಾಡಿದರು.

೧೯೧೪ರಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ಸ್ಕೂಲನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಆರಂಭಗೊಂಡ ಕೈಗಾರಿಕೆಗಳೆಂದರೆ-

ಭದ್ರಾವತಿಯ ಮೈಸೂರು ಕಬ್ಬಿಣದ ಕಾರ್ಖಾನೆ
ಬೆಂಗಳೂರಿನ ಸಾಬೂನು ಕಾರ್ಖಾನೆ
ಮೈಸೂರಿನ ಗಂಧದೆಣ್ಣೆ ಕಾರ್ಖಾನೆ
ಸಿಮೆಂಟ್ ಕಾರ್ಖಾನೆ
೧೯೩೪ – ಮಂಡ್ಯದಲ್ಲಿ ಮೈಸೂರು ಸಕ್ಕರೆ ಕಂಪೆನಿ ಪ್ರಾರಂಭ
೧೯೩೬ – ಮೊಟ್ಟ ಮೊದಲ ಮೈಸೂರು ಪೇಪರ್ ಮಿಲ್ ಆರಂಭ
ಮಂಗಳೂರು ಹೆಂಚು ಕಾರ್ಖಾನೆ
ಷಹಬಾದಿನ ಸಿಮೆಂಟ್ ಕಾರ್ಖಾನೆ
ಮೈಸೂರಿನ ಅರಗು ಮತ್ತು ಬಣ್ಣದ ಕಾರ್ಖಾನೆ
ಕೊಡಗಿನ ಕಾಫಿ ಸಂಶೋಧನಾ ಕೇಂದ್ರಗಳು ಪ್ರಾರಂಭಗೊಂಡವು
೯೧೩ ರಲ್ಲಿ ಹೊಸ ರೈಲು ಸಾರಿಗೆ ನಿರ್ಮಾಣ ಇಲಾಖೆ ಆರಂಭವಾಯಿತು
೧೯೧೮ ರಲ್ಲಿ ಚಿಕ್ಕಬಳ್ಳಾಪುರ-ಯಲಹಂಕ-ಮೈಸೂರು-ಅರಸೀಕೆರೆ ಮೀಟರ್‍ಗೇಜ್ ನಿರ್ಮಾಣವಾಯಿತು.
೧೯೨೧ ರಲ್ಲಿ ಚಿಕ್ಕ ಜಾಜೂರು-ಚಿತ್ರದುರ್ಗ ಮೀಟರ್‍ಗೇಜ್ ನಿರ್ಮಾಣವಾಯಿತು.

Leave a Reply

Your email address will not be published.