Breaking News
ಮಹಾರಾಷ್ಟ್ರ ಕೃಷಿ ಸಚಿವ, ಬಿಜೆಪಿ ಹಿರಿಯ ನಾಯಕ ಪಾಂಡುರಂಗ ಫುಂಡ್ಕರ್ ವಿಧಿವಶ

ಮಹಾರಾಷ್ಟ್ರ ಕೃಷಿ ಸಚಿವ, ಬಿಜೆಪಿ ಹಿರಿಯ ನಾಯಕ ಪಾಂಡುರಂಗ ಫುಂಡ್ಕರ್ ವಿಧಿವಶ

ಮಹಾರಾಷ್ಟ್ರ ಕೃಷಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಪಾಂಡುರಂಗ ಫುಂಡ್ಕರ್ (67) ವಿಧಿವಶರಾಗಿದ್ದಾರೆ. ಕೆಲಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು ಕೊನೆಯುಸಿರೆಳೆದರು.
950ರಲ್ಲಿ ಜನಿಸಿದ್ದ ಪಾಂಡುರಂಗ ಪುಂಡ್ಕರ್ ಅವರು ಲೋಕಸಭಾ ಸದಸ್ಯರಾಗಿ ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದರು. ಇದಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸದ್ಯ ಗಾಮ್‍ಕಾಮ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

2016ರಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಂಪುಟಕ್ಕೆ ಸೇರಿದ್ದ ಪಾಂಡುರಂಗ ಫುಂಡ್ಕರ್ ಕೃಷಿ ಸಚಿವರಾಗಿ ಕೆಲವು ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ಸಚಿವರ ನಿಧನಕ್ಕೆ ಮುಖ್ಯಮಂತ್ರಿ ಫಡ್ನವಿಸ್, ಮಂತ್ರಿಮಂಡಲದ ಸಹೋದ್ಯೋಗಿಗಳು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published.