Breaking News
ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು : ರಾಜ್ಯದ ಎಲ್ಲಾ ವರ್ಗದ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನೆಬೆಂಬಲಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಮಂಗಳವಾರ ಧರಣಿ ನಡೆಸಿದರು.
ರಾಜ್ಯ ಸರಕಾರ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶೈಕ್ಷ ಣಿಕ ಹಾಗೂ ಆರ್ಥಿಕವಾಗಿ ಅನುಕೂಲಕರವಾಗಿದೆ. ಆದರೆ, ಜೆಡಿಎಸ್‌-ಕಾಂಗ್ರೆಸ್‌ ತಮ್ಮ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ ಪಾಸ್‌ ನೀಡುವುದಾಗಿ ಘೋಷಿಸಿತ್ತು. ಹಾಗಾಗಿ ರಾಜ್ಯದಲ್ಲಿನ ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಬೇಕು ಎಂದು ಒತ್ತಾಯಿಸಿದರು.
ನಗರ ಕಾರ್ಯದರ್ಶಿ ಶ್ರೀರಾಮ… ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮನವಿ: ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಶನ್‌, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಶನ್‌ ವತಿಯಿಂದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿತುಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಸಂಘಟನೆಯ ಮುಖಂಡರು ಕಾಂಗ್ರೆಸ್‌ ಸರಕಾರದ ಆಡಳಿತಾವಧಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವುದಾಗಿ ಬಜೆಚ್‌ನಲ್ಲಿ ಘೋಷಿಸಲಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಸತತ ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಿಂದಿನ ಸರಕಾರದ ನಿರ್ಧಾರ ಸಂತಸ ತಂದಿತ್ತು. ಆದರೆ, ಈಗ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲು ಹಿಂದೇಟು ಹಾಕಲಾಗುತ್ತಿದೆ. ಉಚಿತ ಬಸ್‌ ಪಾಸ್‌ ನೀಡುವ ನಿರ್ಧಾರವನ್ನು ತುರ್ತಾಗಿ ಜಾರಿಗೊಳಿಸಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂವಾಗುವಂತಹ ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.

ಎಐಡಿಎಸ್‌ಒ ಕಾರ್ಯದರ್ಶಿ ಚಂದ್ರಕಲಾ, ಎಐಡಿವೈಓ ಕಾರ್ಯದರ್ಶಿ ಸುನಿಲ್‌, ಎಐಎಂಎಸ್‌ ಎಸ್‌ ಉಪಾಧ್ಯಕ್ಷ ಸೀಮಾ ಜಿ.ಎಸ್‌, ಬಸವರಾಜು, ಎಚ್‌.ಎಂ.ಆಸಿಯಾ ಬೇಗಂ, ಆಕಾಶ್‌ ಕುಮಾರ್‌, ಸುಮ, ರಂಜಿತಾ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published.