Breaking News
ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕ ಅಭ್ಯರ್ಥಿ ಕಣಕ್ಕೆ

ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕ ಅಭ್ಯರ್ಥಿ ಕಣಕ್ಕೆ


ಮೈಸೂರು: 
ಒಂದೇ ರಾಷ್ಟ್ರ, ಒಂದೇ ಶಿಕ್ಷಣ, ಒಂದೇ ವೇತನ…

-ಇದು ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಬಿ.ನಿರಂಜನ ಮೂರ್ತಿ ಅವರ ಕನಸು.
ಅದಕ್ಕಾಗಿ 18 ವರ್ಷಗಳಿಂದ ಸಕ್ರಿಯವಾಗಿ ಹೋರಾಡುತ್ತಿರುವ ಅವರು ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಮೇಲ್ಮನೆಯಲ್ಲಿ ದನಿಯಾಗಲು ಇಚ್ಛಿಸಿದ್ದಾರೆ.

ಶಿಕ್ಷಕರ ಸಮಸ್ಯೆಗಳ ಪರಿಹಾರ ಶಿಕ್ಷಕರ ಸಮಸ್ಯೆಗಳನ್ನು ಅರಿತಿರುವ ಶಿಕ್ಷಕನಿಂದ ಮಾತ್ರ ಸಾಧ್ಯ ಎಂದು ನಂಬಿರುವ ಇವರು, ಕಳೆದ ಹಲವು ವರ್ಷಗಳಿಂದ ನಾನಾ ಸಂಘಟನೆಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುವ ಮೂಲಕ ಶೋಷಿತ ಶಿಕ್ಷಕರ ಸಮಸ್ಯೆಗಳಿಗೆ ದನಿಯಾಗಿದ್ದಾರೆ. ಅವರ ಪರವಾಗಿ ಹೋರಾಟ ನಡೆಸುವ ಮೂಲಕ ಯಶಸ್ಸು ಕಂಡಿದ್ದಾರೆ. ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಗಂಭೀರವಾಗಿ ಉಳಿದಿರುವ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಖುದ್ದಾಗಿ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ.

Leave a Reply

Your email address will not be published.