Breaking News

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ

ಮೈಸೂರು:ಕ್ಷುಲ್ಲಕ ವಿಚಾರಕ್ಕೆ ನಾಲ್ವರು ಯುವಕರ ತಂಡವೊಂದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಮೈಸೂರು ಹುಲ್ಲಿನ ಬೀದಿ ನಿವಾಸಿ ಗಣೇಶ್(25)ಹಲ್ಲೆಗೊಳಗಾದವನಾಗಿದ್ದಾನೆ. ಶೀನ, ಪ್ರಕಾಶ, ದರ್ಶನ್, ಮನು ಹಲ್ಲೆ ಮಾಡಿದವರಾಗಿದ್ದಾರೆ. ಗಣೇಶ್ ಸಾರ್ವಜನಿಕ ಸ್ಥಳದಲ್ಲಿ ನಿಂತು ತನ್ನ ಗೆಳೆಯರೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತ ನಿಂತಿದ್ದಾಗ ಈ ನಾಲ್ವರು ಗಣೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಗಣೇಶ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಘಟನೆಯ ಕುರಿತು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಕೆ.ಆರ್.ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಹಲ್ಲೆ ಮಾಡಿದವರ ವಿರುದ್ಧ ದೂರು ದಾಖಲಿಸಿಕೊಂಡು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published.