Breaking News

ಪ್ರವಾಹ ಮುನ್ನೆಚ್ಚರಿಕೆ ಸೂಚನೆ

ಪ್ರವಾಹ ಮುನ್ನೆಚ್ಚರಿಕೆ ಸೂಚನೆ

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿರುತ್ತದೆ.ಜಲಾಶಯವು ಗರಿಷ್ಟ ಮಟ್ಟ ತಲುಪುವುದರಿಂದ ಸುಮಾರು 5000 ಕ್ಯೂಸೆಕ್ಸ್‍ಗಳ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಯಾವ ಸಂದರ್ಭದಲ್ಲಾದರೂ ನದಿಗೆ ಹೆಚ್ಚು ನೀರು ಬಿಡುವ ಸಂಭವವಿದೆ.
ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಮತ್ತು ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಜಲಾಶಯದ ವಿಭಾಗದ ಕಾರ್ಯಪಾಲಕ ಅಭಿಯಂತರ ಸಿ.ಪಿ. ಜಗದೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.