Breaking News

ಸಾಲಮನ್ನಾ ಬಗ್ಗೆ ಯಾವುದೇ ಗೊಂದಲಬೇಡ

ಸಾಲಮನ್ನಾ ಬಗ್ಗೆ ಯಾವುದೇ ಗೊಂದಲಬೇಡ

ಬೆಂಗಳೂರು:ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲ ಬೇಡ. ಸಾಲಮನ್ನಾ ಮಾಡಲು ನಾನು ಸಂಪೂರ್ಣ ಬದ್ಧನಿದ್ದೇನೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವೈಜ್ಞಾನಿಕವಾಗಿ ಸಾಲಮನ್ನಾ ಗರಿಷ್ಠ ರೈತರಿಗೆ ಪ್ರಯೋಜನವಾಗಬೇಕು. ಗರಿಷ್ಠ ರೈತರಿಗೆ ಸಿಗಲೆಂಬುದು ನನ್ನ ಉದ್ದೇಶ. ಹೀಗಾಗಿ ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಅತಿ ಶೀಘ್ರದಲ್ಲೇ ಸಾಲಮನ್ನಾ ಘೋಷಣೆ ಕುರಿತು ಘೋಷಣೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೇ 24 ಗಂಟೆಯೊಳಗೆ ಸಾಲಮನ್ನಾ ಮಾಡುತ್ತೇನೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಚುನಾವಣೆಗೂ ಮುನ್ನ ತಿಳಿಸಿದ್ದರು. ಆದರೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ಕಾಂಗ್ರೆಸ್ ಜತೆ ಕೈಜೋಡಿಸಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದರು.
ಬಳಿಕ ಇತ್ತೀಚೆಗೆ ಸಾಲಮನ್ನಾ ಕುರಿತು ಎಲ್ಲಾ ಜಿಲ್ಲೆಯ ರೈತ ಮುಖಂಡರು ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಸಭೆ ಕರೆದು ಚರ್ಚೆ ನಡೆಸಿ ಸಾಲಮನ್ನಾಗೆ 15 ದಿನ ಕಾಲಾವಕಾಶ ಕೇಳಿದ್ದರು.

Leave a Reply

Your email address will not be published.