Breaking News
ಇನ್ನೂ 5 ದಿನ ರಾಜ್ಯದಲ್ಲಿ ಭಾರಿ ಮಳೆ

ಇನ್ನೂ 5 ದಿನ ರಾಜ್ಯದಲ್ಲಿ ಭಾರಿ ಮಳೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಾದ್ಯಂತ ಶುಕ್ರವಾರ ಭಾರೀ ಮಳೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಕನಿಷ್ಠ 27 ಮಿ.ಮೀ.ನಿಂದ ಗರಿಷ್ಠ 237 ಮಿ.ಮೀ. ವರೆಗೂ ಭರ್ಜರಿ ಮಳೆ ಸುರಿದಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳ ಹಲವೆಡೆಯೂ ಮಳೆ ಬಿದ್ದಿದೆ.

ಜುಲೈ 11ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಹಾಗೂ ಉತ್ತರ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗಲಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Leave a Reply

Your email address will not be published.