Breaking News

ಪ್ರವಾಸ ಕಾರ್ಯಕ್ರಮ

ಪ್ರವಾಸ ಕಾರ್ಯಕ್ರಮ

ಮೈಸೂರು: ಸಣ್ಣ ಮತ್ತು ನೀರಾವರಿ ಸಚಿವರಾದ ಸಿ.ಎಸ್. ಪುಟ್ಟರಾಜು ಅವರು ಜುಲೈ 19 ಹಾಗೂ 20 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಜುಲೈ 19 ರಂದು ಮಧ್ಯಾಹ್ನ 2-15 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕು ಕ್ರೀಡಾಂಗಣ ಹೆಲಿಪ್ಯಾಡ್‍ಗೆ ಆಗಮಿಸಿದ ನಂತರ ರಸ್ತೆ ಮೂಲಕ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಡಿಕೇರಿಯಲ್ಲಿ ವಾಸ್ತವ್ಯ ಹೂಡುವರು.
ಜುಲೈ 20 ರಂದು ಬೆಳಿಗ್ಗೆ 9 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕು ಕ್ರೀಡಾಂಗಣ ಹೆಲಿಪ್ಯಾಡ್‍ಗೆ ಆಗಮಿಸಿ ನಂತರ ಬೆಳಿಗ್ಗೆ 9-30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 9-50 ಗಂಟೆಗೆ ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಮಾತೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸವರು. ಮಧ್ಯಾಹ್ನ 12 ಗಂಟೆಗೆ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 12-20 ಗಂಟೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 1-30 ಗಂಟೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಹೆಲಿಪ್ಯಾಡ್‍ಗೆ ತೆರಳುವರು.

Leave a Reply

Your email address will not be published.