Breaking News

ನಮ್ಮೂರ ಶಾಲೆಗೆ ನಮ್ಮ ಯುವಜನರು : ಅರ್ಜಿ ಆಹ್ವಾನ

ನಮ್ಮೂರ ಶಾಲೆಗೆ ನಮ್ಮ ಯುವಜನರು : ಅರ್ಜಿ ಆಹ್ವಾನ

ಮೈಸೂರು: ರಾಜ್ಯ ಯುವನೀತಿ ಅನುಷ್ಟಾನ ಅಡಿಯಲ್ಲಿ ನಮ್ಮುರ ಶಾಲೆಗೆ ನಮ್ಮ ಯುವಜನರು ಕಾರ್ಯಕ್ರಮದ ಬಗ್ಗೆ ರಾಜ್ಯಾದ್ಯಂತ ಅನುಷ್ಟಾನಗೊಳಿಸಲು 2017-18ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಲಾಗುವುದು.
ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ. 1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ನೀಡಲಾಗುವುದು. ಈ ಅನುದಾನದಲ್ಲಿ ರೂ. 10,000-00 ಗಳನ್ನು ಅಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ. 90,000-00 ಗಳನ್ನು ಶಾಲೆಯ ಎಸ್.ಡಿ.ಎಂ.ಸಿ. ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಲು ನೀಡಲಾಗುವುದು.
ಮೈಸೂರು ಜಿಲ್ಲೆಯಲ್ಲಿ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳು ಪ್ರಸ್ತಾವನೆಯನ್ನು ದಿನಾಂಕ 25-07-2018 ರ ಒಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‍ಬಾದ್, ಮೈಸೂರು ಇವರಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 0821-2564179 ನ್ನು ಸಂಪರ್ಕಿಸುವುದು.

Leave a Reply

Your email address will not be published.