Breaking News

ಜಿಲ್ಲಾ ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಜಿಲ್ಲಾ ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮೈಸೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿ ವರ್ಷವೂ ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ. ಕ್ರೀಡೆ, ಸಾಂಸ್ಕøತಿಕ ಮತ್ತು ಸಮುದಾಯ ಅಭಿವೃದ್ದಿ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೊಂದಾವಣೆಯಾಗಿರುವ ಯುವಕ ಸಂಘಗಳ/ಯುವತಿ ಮಂಡಳಿಗಳ 5 ಮಂದಿ ಯುವಕರಿಗೆ ಅಥವಾ ಯುವತಿಯರಿಗೆ ಮತ್ತು ಯುವಕ ಸಂಘ/ಯುವತಿ ಮಂಡಳಿ ಇವುಗಳ ತಲಾ ಒಂದರಂತೆ ಜಿಲ್ಲಾ ಯುವ ಪ್ರಶಸ್ತಿಯನ್ನು 2018-19ನೇ ಸಾಲಿಗೆ ನೀಡಬೇಕಾಗಿರುತ್ತದೆ.
ಕ್ರೀಡೆ, ಸಾಂಸ್ಕøತಿಕ, ಸಮುದಾಯ ಅಭಿವೃದ್ದಿ ಕ್ಷೇತ್ರಗಳಲ್ಲಿ ಮತ್ತು ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿರುವ 15 ರಿಂದ 35 ವರ್ಷ ವಯೋಮಿತಿಯ ಯುವಕ/ಯುವತಿಯರು ಹಾಗೂ ಯುವಕ ಸಂಘ, ಯುವತಿ ಮಂಡಳಿ ಇವರುಗಳು ಜಿಲ್ಲಾ ಯುವ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಮೈಸೂರು ಜಿಲ್ಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೊಂದಾವಣೆಯಾಗಿರುವ ಯುವಕ ಸಂಘಗಳ, ಯುವತಿ ಮಂಡಳಿಗಳ ಯುವಕ ಅಥವಾ ಯುವತಿಯರು ಹಾಗೂ ಇಲಾಖೆಗೆ ನೊಂದಾಯಿತವಾದ ಯುವಕ ಸಂಘ ಮತ್ತು ಯುವತಿ ಮಂಡಳಿಗಳು ತಮ್ಮ ವೈಯಕ್ತಿಕ ಅರ್ಜಿಯೊಂದಿಗೆ ಸಾಧನೆಗಳ ದೃಢೀಕೃತ ಪ್ರಶಸ್ತಿ ಪತ್ರಗಳ ಪ್ರಸ್ತಾವನೆಯನ್ನು ದಿನಾಂಕ 31-07-2018 ರ ಒಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‍ಬಾದ್, ಮೈಸೂರು ಇವರಿಗೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0821-2564179 ನ್ನು ಸಂಪರ್ಕಿಸಬಹುದು.

Leave a Reply

Your email address will not be published.