Breaking News

ಐಟಿ ದಾಳಿ ಪ್ರಕರಣ ಡಿ.ಕೆ ಶಿವಕುಮಾರ್ ನ್ಯಾಯಾಲಯಕ್ಕೆ ಹಾಜರು

ಐಟಿ ದಾಳಿ ಪ್ರಕರಣ ಡಿ.ಕೆ ಶಿವಕುಮಾರ್ ನ್ಯಾಯಾಲಯಕ್ಕೆ ಹಾಜರು

ಬೆಂಗಳೂರು: ನವದೆಹಲಿಯಲ್ಲಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಇಂದು ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್, ಆಪ್ತರಾದ ಆಂಜನೇಯ, ರಾಜೇಂದ್ರ, ಸಚಿನ್ ನಾರಾಯಣ್, ಹನುಮಂತಯ್ಯಗೆ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆ ಇಂದು ಸಚಿವ ಡಿ.ಕೆ ಶಿವಕುಮಾರ್ ಸೇರಿ ಐವರು ಆರೋಪಿಗಳು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

Leave a Reply

Your email address will not be published.