Breaking News

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಇನ್ನಿಲ್ಲ

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಇನ್ನಿಲ್ಲ

ಚೆನ್ನೈ: ಡಿಎಂಕೆ ಮುಖ್ಯಸ್ಥ,ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.ಕಳೆದ 15 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6.10ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕರುಣಾನಿಧಿಯವರು ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದರು.2016ರಿಂದ ಕರುಣಾನಿಧಿ ಯಾವುದೇ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುತ್ತಿರಲಿಲ್ಲ. ಅವರಿಗೆ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ಕಳೆದ ಶುಕ್ರವಾರ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡುಬಂದಿದ್ದರೂ, ಭಾನುವಾರ ರಾತ್ರಿ ಮತ್ತೆ ಬಿಗಡಾಯಿಸಿತ್ತು. ಹೀಗಾಗಿ ಮತ್ತೆ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಜೀವರಕ್ಷಕ ಸಾಧನಗಳನ್ನು ಅಳವಡಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published.