Breaking News

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಮೈಸೂರು: ನಂಜನಗೂಡು ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಹೊಂದಿರುವ ಗ್ರಾಮಗಳಿಗೆ ಆಗಸ್ಟ್ 11 ಹಾಗೂ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಆಗಸ್ಟ್ 11 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ದೇವೀರಮ್ಮನಹಳ್ಳಿ, ದೇವರಸನಹಳ್ಳಿ, ಕಳಲೆ, ನವಿಲೂರು, ಸಿಂಧುವಳ್ಳಿ, ಕೂಡ್ಲಾಪುರ,ಕಸುವಿನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಲ್ಲಿ ಆಗಸ್ಟ್ 12 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಕೆಂಪಿಸಿದ್ದನಹುಂಡಿ, ಹುಳಿಮಾವು,ಹದಿನಾರು, ಹೊಸಕೋಟೆ, ತುಂಬುನೇರಳೆ, ಬಾಲಾಜಿ, ಇಂಡಸ್, ಗಣಪತಿ, ಕೆಐಎಡಿಬಿ 1&2.
ಗ್ರಾಮಪಂಚಾಯ್ತಿ ವ್ಯಾಪ್ತಿಯ ಪ್ರದೇಶ, ನಂಜನಗೂಡು ಪಟ್ಟಣ, ಕಲ್ಲಳ್ಳಿ ಕೈಗಾರಿಕಾ ಪ್ರದೇಶ ಮತ್ತು ದೇವೀರಮ್ಮನಹಳ್ಳಿ, ದೇವರಸನಹಳ್ಳಿ, ತಾಂಡವಪುರ ಗ್ರಾಮಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.