Breaking News

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಧ್ವಜಾರೋಹಣ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಧ್ವಜಾರೋಹಣ

ಬೆಂಗಳೂರು: 72ನೇ ಸ್ವಾಂತ್ರ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಸ್ವಾತಂತ್ರೋತ್ಸವದ ಸಂದೇಶ ನೀಡಿದ ಮುಖ್ಯಮಂತ್ರಿ, ಜನತೆಗೆ ಸ್ವಾತಂತ್ರ ದಿನಾಚರಣೆಯ ಶುಭಾಶಯ ಕೋರಿದರು.”ಬಾರತ ಭೂಮಿ ನನ್ನ ತಾಯಿ ನನ್ನ ಪೊರೆವ ತೊಟ್ಟಿಲು,ಜೀವನವನೆ ದೇವಿಗೆರೆವೆ ಬಿಡುತೆ ಗುಡಿಯ ಕಟ್ಟಲು”
ರಾಷ್ಟ್ರಕವಿ ಕುವೆಂಪು ಅವರ ಹಾಡನ್ನು ಉಲ್ಲೇಖಿಸಿ ಮಾತನಾಡಿದ ಅವರು, ಆಧುನಿಕ ಪ್ರಪಂಚ ಕಂಡ ಅತ್ಯಂತ ಪ್ರಭಾವಶಾಲಿ ಆಯುಧ ಅಹಿಂಸೆ. ಅಹಿಂಸಾ ಅಸ್ತ್ರದಿಂದ ಸ್ವಾತಂತ್ರವನ್ನು ಗೆದ್ದುಕೊಂಡ ವೀರ ಪರಂಪರೆಯವರು ನಾವು. ವೈವಿಧ್ಯತೆಯಲ್ಲಿ ಏಕತೆ ಸಾಧಿಸಿದ ಕೆಲವೇ ದೇಶಗಳಲ್ಲಿ ಭಾರತ ಅಗ್ರಮಾನ್ಯ. ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರು, ವಲ್ಲಭಬಾಯಿ ಪಟೇಲ್, ಗೋಪಾಲಕೃಷ್ಣ ಗೋಖಲೆ, ಲೋಕಮಾನ್ಯ ತಿಲಕ್, ನೇತಾಜಿ ಸುಭಾಶ್ ಚಂದ್ರ ಬೋಸ್, ಮೌಲಾನಾ ಅಬ್ದುಲ್ ಕಲಾಂ ಆಝಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಎಲ್ಲ ಧೀರ ಸೇನಾನಿಗಳ ವಂದನೆಗಳನ್ನರ್ಪಿಸಿದರು.
ಸ್ವತಂತ್ರ ಭಾರತ ರೂಪುಗೊಂಡದ್ದು, ಮಹಾತ್ಮಾ ಗಾಂಧೀಜಿ ಅವರ ಆಶಯಗಳ ತಳಹದಿಯ ಮೇಲೆ. ಮಹಾತ್ಮ ಗಾಂಧಿ ಅವರ 150ನೇ ಜಯಂತಿಯ ಸಂಭ್ರಮದಲ್ಲಿದ್ದೇವೆ. ಇದಕ್ಕೆ ಪೂರ್ವವೇದಿಕೆಯಾಗಿ ‘ಗಾಂಧಿ-150 ಒಂದು ರಂಗ ಪಯಣ’ ಶೀರ್ಷಿಕೆಯಲ್ಲಿ ರಾಜ್ಯಾದ್ಯಂತ 1000 ರಂಗ ಪ್ರದರ್ಶನಗಳನ್ನು ಮಾಡಲಾಗುವುದು ಹಾಗೂ ಅರ್ಥಪೂರ್ಣವಾಗಿ ಗಾಂಧಿ ಜಯಂತಿ ಆಚರಿಸಲಾಗುವುದು. ಅದೇರೀತಿ ಭಾರತದ ಅಸ್ತಿತ್ವವನ್ನು ವಿಶ್ವಕ್ಕೆ ಸಾರಿದ, ಭಾರತದ ಮಹತ್ವವನ್ನು ಜಗತ್ತಿನಾದ್ಯಂತ ಮೊಳಗಿಸಿದ, ಧೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ವಿಶ್ವಖ್ಯಾತ ಶಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣದ 125ನೇ ವರ್ಷಾಚರಣೆಯ ಹೊಸ್ತಿಲಿನಲ್ಲಿಯೂ ಇದ್ದೇವೆ. ಇದರ ಸಂಭ್ರಮವನ್ನು ರಾಜ್ಯ ಸರ್ಕಾರ ಆಚರಿಸುತ್ತಿದೆ ಎಂದರು.
ಅಖಂಡ ಕರ್ನಾಟಕದ ಅಸ್ಮಿತೆಗೆ ಕಿಂಚಿತ್ತೂ ಭಂಗ ಬಾರದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಹಿಂದಿನ ಸರ್ಕಾರ ಮಂಡಿಸಿದ ಆಯವ್ಯಯ ಹಾಗೂ ಇಂದಿನ ಮೈತ್ರಿ ಸರ್ಕಾರ ಮಂಡಿಸಿದ ಆಯವ್ಯಯ ಎರಡೂ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿವೆ. ಆಯವ್ಯಯಗಳ ಎಲ್ಲಾ ಅಂಶಗಳನ್ನು ಸೂಕ್ತ ಕ್ರಮದಲ್ಲಿ ಅನುಷ್ಠಾನಕ್ಕೆ ತರಲು ನಮ್ಮ ಸರ್ಕಾರ ಕಾರ್ಯತತ್ಪರವಾಗಿದೆ ಎಂದು ಕುಮಾರಸ್ವಾಮಿ ನುಡಿದರು.
ಈಗಾಗಲೇ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಸಹಕಾರಿ ವಲಯದ ಸಾಲ ಮನ್ನಾ ಮಾಡಲು ಆದೇಶಿಸಲಾಗಿದೆ. 20 ಲಕ್ಷ 38 ಸಾವಿರ ರೈತರು ಇದರ ಲಾಭ ಪಡೆಯಲಿದ್ದಾರೆ. ವಾಣಿಜ್ಯ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಲು ಸಹ ಸದ್ಯದಲ್ಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದರು.ರೈತರ ಸಂಕಷ್ಟಗಳಿಗೆ ದೂರದೃಷ್ಟಿಯ ಪರಿಹಾರ ಒದಗಿಸುವುದು, ದುಡಿಯುವ ಕೈಗಳಿಗೆ ಉದ್ಯೋಗಾವಕಾಶ ಸೃಷ್ಟಿಸುವುದು ನಮ್ಮ ಸರ್ಕಾರದ ಆದ್ಯತಾ ವಲಯಗಳಲ್ಲಿ ಪ್ರಮುಖವಾದವು ಎಂದ ಮುಖ್ಯಮಂತ್ರಿ, ಸಾಲ ಮನ್ನಾ ಮಾಡಬೇಕೆಂಬುದು ರೈತರ ಬಹುದಿನಗಳ ಬೇಡಿಕೆ. ಅವರ ಬೇಡಿಕೆಗೆ ಸ್ಪಂದಿಸಿರುವ ನಮ್ಮ ಸರ್ಕಾರ ಸಹಕಾರಿ, ವಾಣಿಜ್ಯ ಬ್ಯಾಂಕುಗಳಲ್ಲಿ ಸುಮಾರು 49 ಸಾವಿರ ಕೋಟಿ ರೂ. ಗಳ ಕೃಷಿ ಸಾಲ ಮನ್ನಾ ಮಾಡಲು ತೀರ್ಮಾನಿಸಿದೆ. ಭಾರತದ ಯಾವುದೇ ರಾಜ್ಯದಲ್ಲಿಯೂ ಈ ಪ್ರಮಾಣದ ರೈತರ ಸಾಲ ಮನ್ನಾ ಜಾರಿಯಾಗಿಲ್ಲ ಎಂದರು.
ರೈತರ ವಿಚಾರದಲ್ಲಿ ರಾಜಕೀಯ ಮಾಡುವುದು ಆರೋಗ್ಯಕರವಲ್ಲ ಎಂದು ಈ ವೇದಿಕೆಯ ಮೂಲಕ ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ ಎಂದ ಕುಮಾರಸ್ವಾಮಿ, ಸಾಲ ಮನ್ನಾ ಕ್ರಮವೊಂದೇ ರೈತರ ಸಮಸ್ಯೆಗಳಿಗೆ ಪರಿಹಾರವಲ್ಲ. ಇದು ಅವರಲ್ಲಿ ಆತ್ಮವಿಶ್ವಾಸ ತುಂಬುವ ಒಂದು ಪ್ರಯತ್ನ ಮಾತ್ರ. ಕೃಷಿ ವಲಯವನ್ನು ಸುಸ್ಥಿರಗೊಳಿಸಲು, ಲಾಭದಾಯಕವನ್ನಾಗಿಸಲು ಏನೇನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.ಎಂದು ಮುಖ್ಯಮಂತ್ರಿ ತಿಳಿಸಿದರು

Leave a Reply

Your email address will not be published.