Breaking News

ಮುಖ್ಯಮಂತ್ರಿ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿ ಪ್ರವಾಸ ಕಾರ್ಯಕ್ರಮ

ಮೈಸೂರು:ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೆಪ್ಟೆಂಬರ್ 11 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಸೆಪ್ಟೆಂಬರ್ 11 ರಂದು ಬೆಳಿಗ್ಗೆ 10-30ಕ್ಕೆ ರಸ್ತೆ ಮೂಲಕ ಮೈಸೂರಿಗೆ ಆಗಮಿಸಿ.ಕಲಾಮಂದಿರದ ಸುಚಿತ್ರಾ ಗ್ಯಾಲರಿಯಲ್ಲಿ ಮೈಸೂರು ನಗರ ಪತ್ರಿಕಾ ಛಾಯಾಗ್ರಾಹಕರ ವತಿಯಿಂದ ವಿಶ್ವ ಛಾಯಾಗ್ರಾಹಣ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿರುವ ಛಾಯಾಚಿತ್ರ
ಪ್ರದರ್ಶನ-2018 ಉದ್ಘಾಟಿಸುವರು.
ಬೆಳಿಗ್ಗೆ 11-30ಕ್ಕೆ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿರುವ ಸಾಂಸ್ಕøತಿಕ ವೇದಿಕೆ 2018-19 ಸಾಂಸ್ಕøತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಮೈಸೂರು ಸ್ನಾತಕ ಮತ್ತು ಸ್ನಾತಕೋತ್ತರ ಕೇಂದ್ರ ಇವರು ಆಯೋಜಿಸಿರುವ 2018-19ನೇ ಸಾಲಿನ ಸಾಂಸ್ಕøತಿಕ, ಕ್ರೀಡೆ, ಎನ್.ಸಿ.ಸಿ., ಎನ್.ಎಸ್.ಎಸ್., ಅನಾವರಣ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೆಡ್‍ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸಂಜೆ 4 ಗಂಟೆಗೆ ಮೈಸೂರು ರಸ್ತೆಯ ಮೂಲಕ ಬೆಂಗಳೂರಿಗೆ ತೆರಳುವರು.

Leave a Reply

Your email address will not be published.