Breaking News

ಏಜೆಂಟ್ ನೇಮಕ: ನೇರ ಸಂದರ್ಶನ

ಏಜೆಂಟ್  ನೇಮಕ: ನೇರ ಸಂದರ್ಶನ

ಮೈಸೂರು:ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯನ್ನು ಸಾರ್ವಜನಿಕರಿಗೆ ತಲುಪಿಸುವ ಸಲುವಾಗಿ ಏಜೆಂಟ್ ನೇಮಕ ಮಾಡಲು ದಿನಾಂಕ 16-10-2018 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಯಾದವಗಿರಿ ಮೈಸೂರು-570020 ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ನೇರ ಸಂದರ್ಶನಲ್ಲಿ ಪಾಲ್ಗೊಳ್ಳಲು ಇಚ್ಫಿಸುವ ಅಭ್ಯರ್ಥಿಗಳು ಜನ್ಮ ದಿನಾಂಕ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರಗಳನ್ನು ತರತಕ್ಕದ್ದು, ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಲ್ಲಿ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. 18 ರಿಂದ 60 ವರ್ಷದೊಳಗಿರಬೇಕು.
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ನಿಗಧಿತ ಸ್ಥಿರ ವೇತನ ಕೊಡಲಾಗುವುದಿಲ್ಲ ಬದಲಾಗಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಮಾಡಿಸಿರುವ ವ್ಯವಹಾರದ ಆಧಾರದ ಮೇಲೆ ಇನ್ಸೆಂಟಿವ್ ಹಣವನ್ನು ಕೊಡಲಾಗುವುದು.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2417307/ 2417308 ನ್ನು ಸಂಪರ್ಕಿಸಬಹುದು.

Leave a Reply

Your email address will not be published.