Breaking News

ಇಲವಾಲ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಇಲವಾಲ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಮೈಸೂರು:ಗ್ರಾಪಂ ಸದಸ್ಯನಿಗೆ ಎಸ್ಐ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಇಲವಾಲ ಪೊಲೀಸ್ ಠಾಣೆ ಬಳಿ ಇಲವಾಲ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಇಂದು ಇಲವಾಲ ಪೊಲೀಸ್ ಠಾಣೆ ಎದುರು ಜಮಾಯಿಸಿದ ಗ್ರಾಮಸ್ಥರು ಎಸ್ಐ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎಸ್.ಐ.ಮುದ್ದು ಮಾದಪ್ಪನವರನ್ನು ಕೂಡಲೇ ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು. ಗಣಪತಿ ವಿಸರ್ಜನೆ ವಿಚಾರವಾಗಿ ಗ್ರಾ.ಪಂ.ಸದಸ್ಯ ಸಿದ್ದರಾಜ್ ನಾಯಕ್ ಅವರನ್ನು ಎಸ್ ಐ ಅವಾಚ್ಯ ಶಬ್ದಗಳಿಂದ ನಿಂದಿಸಿ‌ದ್ದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published.