Breaking News

ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು

ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು

ಮೈಸೂರು:ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಮಹಾರಾಣಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೆಂಪನಂಜಮ್ಮಣ್ಣಿ ಸಭಾಭವನದಲ್ಲಿಂದು ಸಾಮಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಯಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ. ಪಠ್ಯ ಶಿಕ್ಷಣ, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕೃತಿ ವಿಭಾಗಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿವೆ ಎಂಬುದನ್ನು ಮೊದಲು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳು ಸಾಧಿಸುವ ಛಲ,ಹಠ,ಪರಿಶ್ರಮವನ್ನು ರೂಢಿಸಿಕೊಳ್ಳಬೇಕು. ಸೋಲಿಗೆ ಹೆದರಿ ನಿರಾಶರಾದರೆ ಗೆಲುವು ಸಾಧ್ಯವಿಲ್ಲ. ಸೋಲನ್ನೇ ಗೆಲುವಿನ ಮೆಟ್ಟಿಲಾಗಿಸಿಕೊಂಡು ಮುನ್ನಡೆದರೆ ಯಾವ ಶಕ್ತಿಯೂ ನಿಮ್ಮನ್ನು ತಡೆಯಲು ಸಾಧ್ಯವಿಲ್ಲ. ಗುರಿಯೆಡೆಗೆ ಗಮನವಿಟ್ಟು ಪ್ರಯತ್ನಿಸಿದರೆ ಯಶಸ್ಸು ಖಂಡಿತ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಶೌಚಾಲಯ ಉದ್ಘಾಟಿಸಿದರು. ಪ.ಪೂ.ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ, ಉಪ ಪ್ರಾಂಶುಪಾಲೆ ವಸಂತಕುಮಾರಿ, ಮನಪಾ ಸದಸ್ಯೆ ಪ್ರಮೀಳಾ ಭರತ್, ಮ.ಸ.ಪ.ಪೂ ಪ್ರಾಚಾರ್ಯ ಸೋಮಣ್ಣ ಪಿ. ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.