Breaking News

ದಸರಾ ಕನ್ನಡ ಪುಸ್ತಕ ಮೇಳ : ಮಳಿಗೆಗೆ ಅರ್ಜಿ ಆಹ್ವಾನ

ದಸರಾ ಕನ್ನಡ ಪುಸ್ತಕ ಮೇಳ : ಮಳಿಗೆಗೆ ಅರ್ಜಿ ಆಹ್ವಾನ

ಮೈಸೂರು:ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 10 ರಿಂದ 19 ವರೆಗೆ ಮೈಸೂರಿನಲ್ಲಿ ದಸರಾ ಕನ್ನಡ ಪುಸ್ತಕ ಮೇಳವನ್ನು ಕಾಡಾ ಮೈದಾನ ಇಲ್ಲಿ ನಡೆಯಲಿದೆ.
ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆ /ಪ್ರದರ್ಶಕರು ಭಾಗವಹಿಸಬಹುದಾಗಿದ್ದು,50 ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು. ನಿಗದಿತ ಅರ್ಜಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅಥವಾ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಥವಾ ವೆಬ್‍ಸೈಟ್ www.kannadapustakapradhikara.com ಪಡೆದು ಮಳಿಗೆಯೊಂದಕ್ಕೆ ರೂ.2,000/-ಬಾಡಿಗೆ ಹಾಗೂ ರೂ.1,000/- ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಪಡೆದು
ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅಕ್ಟೋಬರ್ 6 ರಂದು ಸಂಜೆ 5 ಗಂಟೆಗೆ ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ,ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ:080-22484516 / 22107704 ಸಂಪರ್ಕಿಸುವುದು.

Leave a Reply

Your email address will not be published.